fbpx

ಮುಸ್ಲಿಮರಲ್ಲ ಬ್ರಾಹ್ಮಣರು ಅಲ್ಪಸಂಖ್ಯಾತರು, ಅವರಿಗೆ ಮೀಸಲಾತಿ ನೀಡಿ: ಬಸವನಗೌಡ ಪಾಟೀಲ್ ಯತ್ನಾಳ್

ರಾಜ್ಯ ಸರ್ಕಾರ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳಿಗೆ ಮೀಸಲಾತಿ ಹೆಚ್ಚಿಸುವ ನಿರ್ಧಾರ ಮಾಡಿದ್ದು, ವಾಲ್ಮೀಕಿ ಸಮುದಾಯದ ಬಹುಕಾಲದ ಬೇಡಿಕೆಗೆ ಯಶಸ್ಸು ಸಿಕ್ಕಿದೆ. ಚುನಾವಣೆ ಹತ್ತಿರವಿರುವಾಗ ಎಸ್‌ಸಿ, ಎಸ್‌ಟಿ ಮೀಸಲಾತಿ ಏರಿಕೆಗೆ ಬಿಜೆಪಿ ಸರ್ಕಾರ ಅನುಮೊದನೆ ನೀಡಿದ್ದು ಸಾಕಷ್ಟು ಪರ ವಿರೋಧದ ಚರ್ಚೆಗೆ ಕಾರಣವಾಗಿದೆ.

ಈ ಸಂಬಂಧ ಮಾತನಾಡಿದ ಬಿಜೆಪಿ ಮಾಜಿ ಸಚಿವ ಮತ್ತು ಹಿರಿಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌, ಮುಸಲ್ಮಾನರು ಅಲ್ಪಸಂಖ್ಯಾತರಲ್ಲ ಎಂದು ಹೇಳಿದ್ದಾರೆ. ಜತೆಗೆ ಬ್ರಾಹ್ಮಣರು ಅಲ್ಪಸಂಖ್ಯಾತರು ಎಂದು ಹೊಸ ಮೀಸಲಾತಿ ಬೇಡಿಕೆಯನ್ನು ಯತ್ನಾಳ್‌ ಮುಂದಿಟ್ಟಿದ್ದಾರೆ. ಅವರ ಈ ಹೇಳಿಕೆ ಟೀಕೆಗೆ ಗುರಿಯಾಗುವ ಸಾಧ್ಯತೆಗಳಿವೆ.

“ಬ್ರಾಹ್ಮಣರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗಬೇಕು. ಬ್ರಾಹ್ಮಣರು ಅಲ್ಪಸಂಖ್ಯಾತರು. ಬ್ರಾಹ್ಮಣರು ಕೇವಲ ಶೇಕಡಾ 2ರಿಂದ3 ರಷ್ಟಿದ್ದಾರೆ. ನಿಜವಾದ ಅಲ್ಪ ಸಂಖ್ಯಾತರು ಬ್ರಾಹ್ಮಣರು. ಅಲ್ಪಸಂಖ್ಯಾತ ಪಟ್ಟಿಯಲ್ಲಿ ಬ್ರಾಹ್ಮಣರನ್ನ ಸೇರಿಸಬೇಕು, ಇದು ನನ್ನ ವಾದ,” ಎಂದು ಯತ್ನಾಳ್ ಹೇಳಿದ್ದಾರೆ. ಮುಸಲ್ಮಾನರು ಅಲ್ಪ ಸಂಖ್ಯಾತರು ಅಲ್ಲವೇ ಅಲ್ಲಾ ಎಂದ ಯತ್ನಾಳ್, ಒಂದು ಜನಾಂಗದಷ್ಟಿರುವ ಮುಸ್ಲಿಂ ಹೇಗೆ ಅಲ್ಪ ಸಂಖ್ಯಾತರಾಗ್ತಾರೆ? ಎಂದು ಪ್ರಶ್ನಿಸಿದ್ದಾರೆ.

“ದೇಶದ್ರೋಹಿ ಕೆಲಸ ಮಾಡೋದು, ಪಾಕಿಸ್ತಾನದ ಪರ ಮಾತನಾಡೋದು ಈಗ ಮೀಸಲಾತಿ ಬೇಕು ಅಂದ್ರೆ ಹೇಗೆ?? ಬಹಳ ಸೌಲಭ್ಯ ಬೇಕಿದ್ದರೆ ಮುಸ್ಲಿಂರು ಪಾಕಿಸ್ತಾನಕ್ಕೆ ಹೋಗಲಿ. ಸೌಲಭ್ಯಕ್ಕಾಗಿ ಪಾಕಿಸ್ತಾನಕ್ಕೆ ಹೋಗಬಹುದು,” ಎಂದ ಯತ್ನಾಳ್ ಹೇಳಿದ್ದಾರೆ. ಯತ್ನಾಳ್‌ ಅನ್ಯ ಸಮುದಾಯದ ಕುರಿತಾಗಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಇದು ಮೊದಲೇನಲ್ಲ. ಆಗಾಗ ಈ ರೀತಿಯ ವಿವಾದಗಳನ್ನು ಸೃಷ್ಟಿಸುತ್ತಲೇ ಇರುತ್ತಾರೆ.

error: Content is protected !!