fbpx

ಮೇ ೨೦ ರಂದು ಕೊಡಗು ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ

ಕೊಡಗು ಪತ್ರಕರ್ತರ ಸಂಘದ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮೇ ೨೦ ರಂದು ನಡೆಯಲಿದೆ.

ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಮಧ್ಯಾಹ್ನ ೨.೩೦ಕ್ಕೆ ನಡೆಯುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದು, ಹಿರಿಯ ಪತ್ರಕರ್ತ ಬಿ.ಜಿ.ಅನಂತಶಯನ ಅಧ್ಯಕ್ಷತೆ ವಹಿಸಲಿದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಕ್ಷೇಮ ನಿಧಿ ಉದ್ಘಾಟಿಸಲಿದ್ದಾರೆ.

ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಎಸ್.ಬಿ.ರವಿ ಕುಶಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ಎಂ.ಪಿ.ಸುಜಾ ಕುಶಾಲಪ್ಪ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ರಮೇಶ್ ಹೊಳ್ಳ, ಕೊಡಗು ಪತ್ರಿಕಾ ಭವನ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಬಿ.ಎನ್.ಮನುಶೆಣೈ, ಹಿರಿಯ ಪತ್ರಕರ್ತ ಟಿ.ಪಿ.ರಮೇಶ್ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ತಿಳಿಸಿದ್ದಾರೆ.

error: Content is protected !!
satta king chart