ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರದಿದ್ದರೆ ಕರ್ಪ್ಯೂ ಮುಂದುವರಿಕೆ ಅನಿವಾರ್ಯ: ಸಚಿವ ಡಾ.ಕೆ. ಸುಧಾಕರ್
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈಗಾಗಲೇ 14 ದಿನಗಳ ಕರ್ಪ್ಯೂ ವಿಧಿಸಲಾಗಿದ್ದು, ಆದರೆ ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರದಿದ್ದರೆ ಕರ್ಪ್ಯೂ ಮುಂದುವರೆಸುವುದು ಅನಿವಾರ್ಯವಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಕಡಿಮೆಯಾಗಬೇಕಾದರೆ ಚೈನ್ ಲಿಂಕ್ ಮುರಿಯಬೇಕು. ಅದಕ್ಕಾಗಿ 14 ದಿನ ಕರ್ಪ್ಯೂ ಜಾರಿ ಮಾಡಲಾಗಿದೆ. ಜನರು ಜವಾಬ್ದಾರಿಯಿಂದ ವರ್ತಿಸಿ ಚೈನ್ ಕಡಿತಕ್ಕೆ ಸಹಕರಿಸಬೇಕು. ಇಲ್ಲದಿದ್ದರೆ ಸೋಂಕು ಹೆಚ್ಚಳವಾದರೆ ಮತ್ತೆ ಕರ್ಪ್ಯೂ ಮುಂದುವರೆಸುವುದು ಅನಿವಾರ್ಯವಾಗಲಿದೆ ಎಂದು ಹೇಳಿದ್ದಾರೆ.