fbpx

ಶ್ರದ್ಧಾಂಜಲಿ ಅರ್ಪಣೆ

ಮಡಿಕೇರಿ ಮೇ 19. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ವತಿಯಿಂದ ಇಂದು ನಿಧನರಾದ ಕನ್ನಡದ ಖ್ಯಾತ ಸಾಹಿತಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಡಿ.ಎಸ್ ನಾಗಭೂಷಣ್ ರವರ ಆತ್ಮಕ್ಕೆ ಸದ್ಗತಿ ಕೋರಿ ಶೃದ್ದಾಂಜಲಿ ಅರ್ಪಿಸಲಾಯಿತು.
ಸಂತಾಪ ಸಭೆಯನ್ನು ಉದ್ದೇಶಿಸಿ ಕೊಡಗು ಕಸಾಪದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡುತ್ತಾ ನಾಗಭೂಷಣ್ ರವರು ಹಿರಿಯ ಸಾಹಿತಿ, ಚಿಂತಕ, ಮಡಿಕೇರಿ ಆಕಾಶವಾಣಿಯಲ್ಲಿ ಹಲವಾರು ವರ್ಷಗಳ ಕಾಲ ಸಾಹಿತ್ಯಿಕ ಸೇವೆ ಸಲ್ಲಿಸಿದ್ದಾರೆ ಎಂದರು. ಅವರ ಗಾಂಧಿ ಕಥನ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ 2021 ನೇ ಸಾಲಿನ ಪ್ರಶಸ್ತಿ ಬಂದಿರುತ್ತದೆ ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ ನಾಗಭೂಷಣ್ ರವರು ಪ್ರಗತಿಪರ ಚಿಂತಕ ರಾಗಿದ್ದು ಹಲವಾರು ಲೇಖನಗಳನ್ನು ಪ್ರಕಟಿಸಿದ್ದಾರೆ.
ಅವರು ಸಮಾಜವಾದಿ ಚಿಂತಕರಾಗಿದ್ದು ಗಾಂಧಿ ಬಗ್ಗೆ ಹಲವಾರು ಲೇಖನಗಳನ್ನು ಬರೆದಿದ್ದಾರೆ. ಇಂದಿಗೆ ಬೇಕಾದ ಗಾಂಧಿ, ಲೋಹಿಯಾ ಜೊತೆಯಲ್ಲಿ, ಕುವೆಂಪು ಒಂದು ಪುನರನ್ವೇಷಣೆ, ಕುವೆಂಪು ಸಾಹಿತ್ಯ ದರ್ಶನ ಅಲ್ಲದೆ ಹಲವಾರು ಪುಸ್ತಕಗಳನ್ನು ಬರೆದು ಪ್ರಕಟಿಸಿದ್ದಾರೆ ಎಂದರು. ಇವರ ನಿಧನದಿಂದ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.
ಮಡಿಕೇರಿ ಕಸಾಪದ ಮಾಜಿ ಅಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯೂ ಮಾತನಾಡಿದರು.

ಸಂತಾಪ ಸಭೆಯಲ್ಲಿ ಕೊಡಗು ಪತ್ರಿಕಾ ಭವನದ ಮ್ಯಾನೇಜಿಂಗ್ ಟ್ರಸ್ಟಿ ಬಿ.ಎನ್ ಮನು ಶೆಣೈ, ಕೊಡಗು ಕಸಾಪದ ಗೌರವ ಕಾರ್ಯದರ್ಶಿ ಎಸ್. ಐ. ಮುನೀರ್ ಅಹಮದ್, ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ಅಂಬೆಕಲ್ ನವೀನ್, ಪತ್ರಕರ್ತ ಶ್ರೀಧರ ಹೂವಲ್ಲಿ ಉಪಸ್ಥಿತರಿದ್ದರು.

error: Content is protected !!