ಸೆ.29ರಂದು ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ: ಸಂಪತ್ ಕುಮಾರ್
ರೋಟರಿ ಕ್ಲಬ್ ಆಫ್ ಮಡಿಕೇರಿ ವುಡ್ಸ್, ಅಶ್ವಿನಿ ಆಸ್ಪತ್ರೆ ಮಡಿಕೇರಿ, ಮೈಸೂರು ಸುಯೋಗ್ ಆಸ್ಪತ್ರೆ, ಕೊಡಗು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಸೆ.29ರಂದು ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ ಎಂದು ರೋಟರಿ ಕ್ಲಬ್ ಆಫ್ ಮಡಿಕೇರಿ ವುಡ್‌ಸ್ ಅಧ್ಯಕ್ಷ ಸಂಪತ್ ಕುಮಾರ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪತ್ರಿಕಾ ಗೋಷ್ಠಿಯಲ್ಲಿ ಅಶ್ವಿನಿ ಆಸ್ಪತ್ರೆಯ ಕಾರ್ಯದರ್ಶಿ ಕುಪ್ಪಂಡ ರಾಜಪ್ಪ, ವಿಶ್ವ ಹಿಂದು ಪರಿಷತ್‌ನ ರಾಷ್ಟ್ರೀಯ ಸಮಿತಿಯ ಟ್ರಸ್ಟಿ ಛಾಯ ನಂಜಪ್ಪ, ರೋಟರಿ ಕ್ಲಬ್ ಆಫ್ ಮಡಿಕೇರಿ ವುಡ್‌ಸ್‌ನ ಉಪಾಧ್ಯಕ್ಷ ಪದ್ಮಗಿರಿ ಹಾಜರಿದ್ದರು.